ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ಗಂಟೆವರೆಗೆ ಅನುಮತಿ:ಡಾ.ಸುಧಾಕರ ಕೆ

ಕರ್ನಾಟಕ :ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಪ್ರಸ್ತುತ ಮಾರ್ಗಸೂಚಿಯಲ್ಲಿ ಜಾರಿಯಲ್ಲಿರುವ ನಿಯಮಗಳು ಯಥಾಸ್ಥಿತಿ ಮುಂದುವರೆಯಲಿದೆ.

promotions

ಉಳಿದ ಜಿಲ್ಲೆಗಳಲ್ಲಿ ಕಾರ್ಖಾನೆಗಳನ್ನು ಶೇ.50% ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದ್ದು, ಗಾರ್ಮೆಂಟ್ಸ್ ಕಾರ್ಖಾನೆಗಳು ಶೇ.30% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ಗಂಟೆವರೆಗೆ ಅನುಮತಿ ನೀಡಲಾಗಿದ್ದು, ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಮುಂದುವರೆಯುತ್ತದೆ.

ರಾಜ್ಯದಲ್ಲಿ ಸೋಂಕು ಇಳಿಮುಖವಾಗುತ್ತಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಡಾ ಸುಧಾಕರ ಕೋರಿದ್ದಾರೆ.

Read More Articles