ತೈಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ : ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಕಚ್ಚಾತೈಲ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಬೆಳಗಾವಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಎಲ್ಲ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

promotions
logintomyvoice

ಕೇಂದ್ರದಲ್ಲಿ ಬಿಜೆಪಿ ಸರಕಾರ ಬರುವ ಮುಂಚೆ ನರೇಂದ್ರ ಮೋದಿ ದೇಶದ ಜನರಿಗೆ ಅಚ್ಚೆ ದಿನ ನೀಡುವುದಾಗಿ ಘೋಷಣೆ ಮಾಡಿದ್ದರು. ದೇಶದಲ್ಲಿ ಕಳೆದ ಏಳು ವರ್ಷಗಳಿಂದ ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ನೂರು ರು.ಗೆ ಒಂದು ಲೀಟರ್ ಬಂದು ನಿಂತಿದೆ ಎಂದರೆ ಇದು ಮೋದಿಯ ಅಚ್ವೆ ದಿನ ಎಂದು ಲೇವಡಿ ಮಾಡಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಾವಲಗಟ್ಟಿ, ಜಯಶ್ರೀ ಮಾಳಗಿ ಸೇರಿದಂತೆ ಅನೇಕರು ಹಾಜರಿದ್ದರು

promotions

Read More Articles