ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಗೆ ಈಗ ಮುಂಬೈ ನಂಜಿನ ಆತಂಕ ಶುರು ಆಗಿದೆ, ಇಂದು 1009 ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದೆ, ಜಿಲ್ಲೆಯಲ್ಲಿ 36 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಇದ್ದು 35 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 8996 ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಆಗಿದ್ದು 7708 ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 128 ಜನರಲ್ಲಿ ಕೊರೊನಾ ಪಾಸಿಟಿವ್ ಇದ್ದು, ಓರ್ವ ವೃದ್ಧೆ ಸಾವನಪ್ಪಿದ್ದಾಳೆ 93 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 1009 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದೆ.