ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ 20 ವರ್ಷ ಜೈಲು 10 ಸಾವಿರ ದಂಡ
ಚಿಕ್ಕೋಡಿ:ಚಿಕ್ಕೋಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಅತ್ಯಾಚಾರ, ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ 6 ಅಪರಾಧಿಗಳಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ, ತೀರ್ಪು ಪ್ರಕಟಿಸಿದೆ.
ರಾಯಬಾಗ ತಾಲೂಕಿನ ನಸಲಾಪುರ ಗ್ರಾಮದ ಸಚಿನ ಮಾನೆ, ರಾಕೇಶ್ ರಾಯಮಾನೆ,ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ರೋಹಿಣಿ ದೀಕ್ಷಿತ್,ಮಹಾರಾಷ್ಟ್ರದ ಮೀರಜ್ ತಾಲ್ಲೂಕಿನ ಕುಪ್ಪವಾಡದ ವಿನೋದ್ ರಾಯಮಾನೆ ಹಾಗೂ ವಿಜಯ ಸಾಳುಂಕೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಸಚಿನ ಮಾನೆ ಹಾಗೂ ಇನ್ನುಳಿದ ಐವರು ಪ್ರಚೋದನೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆವಿಧಿಸಲಾಗಿದೆ.
ಸರ್ಕಾರದ ಪರವಾಗಿ ವಿಶೇಷವಾಗಿ ಅಭಿಯೋಜಕ ಎಲ್ ವಿ ಪಾಟೀಲ್ ವಾದ ಮಂಡಿಸಿದರು.