ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಜನಪ್ರತಿನಿಧಿಗಳಿಂದ ಚಾಲನೆ
- 15 Jan 2024 , 1:13 AM
- Koppal
- 120
ಕೊಪ್ಪಳ: ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ, ಪ್ರತಿ ನಿಮಿಷಕ್ಕೆ 1,000 ಲೀ ಮೆಡಿಕಲ್ ಆಕ್ಸಿಜನ್ ಉತ್ಪಾದಿಸುವ, ಆಕ್ಸಿಜನ್ ಘಟಕವನ್ನು ಶನಿವಾರ ಉದ್ಘಾಟನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ, ಕೊಪ್ಪಳ ಜಿಲ್ಲಾ ಆಸ್ಪತ್ರೆಯ ರೋಗಿಗಳ ಚಿಕಿತ್ಸೆಯ ಅನುಕೂಲಕ್ಕಾಗಿ, ಸಿಂಜೆಂಟಾ ಎನ್.ಜಿ.ಒ ದವರು ನೀಡಿದ 20 ಬೆಡ್ ಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ್, ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ಜಿಲ್ಲಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಇತರೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












