ಇಹಲೋಕ ತ್ಯಜಿಸಿದ ಹಾಸ್ಯ ನಟ ಮಿಮಿಕ್ರಿ ರಾಜಗೋಪಾಲ್
- 14 Jan 2024 , 11:06 PM
- Bengaluru
- 93
ಬೆಂಗಳೂರು : ಕನ್ನಡದ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್(69) ಇಂದು ವಿಧಿವಶರಾಗಿದ್ದಾರೆ. ಕಿಡ್ನಿ ಮತ್ತು ಅಸ್ತಮಾ ರೋಗದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೆಂಗೇರಿಯ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಹಾಗೂ ಇತರ ಭಾಷೆಗಳಲ್ಲಿ ಸುಮಾರು 650 ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಹಾಸ್ಯನಟನಾಗಿ ಪೋಷಕ ನಟನಾಗಿ ಅಭಿನಯಿಸಿದ್ದಾರೆ. ಅವರ ನಿಧನದಿಂದ ಚಿತ್ರರಂಗ ಕಂಬನಿ ಮಿಡಿದಿದೆ. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.











