ಸೋಮವಾರದಿಂದ ಜುಲೈ 19 ರವರೆಗೆ ಅನ್ ಲಾಕ್ ಘೋಷಣೆ ಮಾಡಿದ ಸಿಎಂ
- 14 Jan 2024 , 10:49 PM
- Bengaluru
- 124
ಬೆಂಗಳೂರು ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಸೋಮವಾರದಿಂದ ಜುಲೈ 19ರವರೆಗೆ ರಾಜ್ಯದಲ್ಲಿ ಹೇರಲಾದ ಲಾಕ್ ಡೌನ್ ವನ್ನು ಸಡಿಲಿಕೆ ಮಾಡಿಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.

ಅವರು ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ರಾಜ್ಯದಲ್ಲಿರುವ ಸರಕಾರಿ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಶಾಪಿಂಗ್ ಮಾಲ್ ತೆರೆಯಲು, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಯಲ್ಲಿ ಶೇ.100 ರಷ್ಟು ಪ್ರಯಾಣಿಕರು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು.











