ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಈಶ್ವರಪ್ಪ
- 14 Jan 2024 , 10:16 PM
- Belagavi
- 134
ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿರುತ್ತದೆ ಎಂದು ವಿವರಿಸಿದರು. ಬದು ನಿರ್ಮಾಣ 3444 ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.
ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ , 2,33, 713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ. ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ ಎಂದು ತಿಳಿಸಿದರು. ಶಾಸಕರಾದ ಮಹಾಂತೇಶ ದೊಡ್ಡಗೌಡರ ಮಾತನಾಡಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಮನವಿ ಮಾಡಿಕೊಂಡರು. ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ ಅಂತರ್ಜಲ ಚೈತನ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಮಾತನಾಡಿ ನರೇಗಾ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.











