ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ ಸೇರ್ಪಡೆಗೊಂಡವರು ಯಾರು ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್
- 15 Jan 2024 , 3:36 AM
- Delhi
- 143
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣರಾಗಿದ್ದ ಸಂಸದ ಜ್ಯೋತಿರಾದಿತ್ಯ ಸಿಂಧಿಯಾಗೂ ಸಚಿವ ಸ್ಥಾನ ದೊರೆತಿದ್ದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಬಾರಿ ಹೆಚ್ಚಿನ ಸಂಖ್ಯೆಯ ಎಸ್ ಸಿ, ಎಸ್ ಟಿ ಪ್ರತಿನಿಧಿಸುವ ಸಂಸದರು ಸೇರಿದಂತೆ 43 ಹೊಸ ಸದಸ್ಯರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟ ಸೇರಿದ್ದಾರೆ
ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರಲಿದ್ದಾರೆ. ಕ್ಯಾಬಿನೆಟ್ ವಿಸ್ತರಣೆಯ ನಂತರ, ಮೋದಿ ಸರ್ಕಾರ 27 ಒಬಿಸಿ ನಾಯಕರನ್ನು ಹೊಂದುವ ನಿರೀಕ್ಷೆಯಿದೆ. ಅದರಲ್ಲಿ ಐವರು ಕ್ಯಾಬಿನೆಟ್ ನಲ್ಲಿರುತ್ತಾರೆ. ಸಚಿವರ ಕಾರ್ಯಕ್ಷಮತೆಯನ್ನು ಆಧರಿಸಿ ಮುಂಬಡ್ತಿ, ಖೊಕ್ ನೀಡಲಾಗಿದೆ.

ಪ್ರಧಾನಿ ಅವರ ಸಲಹೆಯಂತೆ ರಾಷ್ಟ್ರಪತಿಗಳು ತಕ್ಷಣದ ಜಾರಿಗೆ ಬರುವಂತೆ ಕೆಳಗಿನ ಸದಸ್ಯರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ
1. ಶ್ರೀ ಡಿ.ವಿ.ಸದಾನಂದ ಗೌಡ
2. ಶ್ರೀ ರವಿಶಂಕರ್ ಪ್ರಸಾದ್
3. ಶ್ರೀ ಥಾವರ್‌ಚಂದ್ ಗೆಹ್ಲೋಟ್
4. ಶ್ರೀ ರಮೇಶ್ ಪೋಖ್ರಿಯಾಲ ನಿಶಾಂಕ್
5. ಡಾ.ಹರ್ಷ್ ವರ್ಧನ್
6. ಶ್ರೀ ಪ್ರಕಾಶ್ ಜಾವಡೇಕರ್
7. ಶ್ರೀ ಸಂತೋಷ್ ಕುಮಾರ್ ಗಂಗ್ವಾರ್
8. ಶ್ರೀ ಬಾಬುಲ್ ಸುಪ್ರಿಯೋ
9. ಶ್ರೀ ಧೋತ್ರೆ ಸಂಜಯ್ ಶಮರಾವ್
10. ಶ್ರೀ ರಟ್ಟನ್ ಲಾಲ್ ಕಟಾರಿಯಾ
11. ಶ್ರೀ ಪ್ರತಾಪ್ ಚಂದ್ರ ಸರಂಗಿ
12. ಸುಶ್ರಿ ದೇಬಶ್ರೀ ಚೌಧುರಿ










