ರೈತರ ಜಮೀನಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿ: ಶಾಸಕ ಸತೀಶ
- 15 Jan 2024 , 5:07 AM
- Belagavi
- 116
ಬೆಳಗಾವಿ: ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆದ ಗ್ರಾಹಕರು ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಾಯಿತು.

ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸಂಬಂಧಿತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸುವಂತೆ, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಹೊಲ, ಗದ್ದೆಗಳು ಹಾಗೂ ಗ್ರಾಹಕರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಕೃಷಿ ಚಟುವಟಿಕೆ ಮತ್ತು ಕುಡಿಯುವ ನೀರಿಗಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಕಾಮಗಾರಿಗಳ ನಿರ್ವಹಣೆಯಲ್ಲಿ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಲಾಯಿತು.










