ಇಂಜಿನಿಯರಿಂಗ್ ವಿಧ್ಯಾರ್ಥಿ ಆತ್ಮಹತ್ಯೆ
- 15 Jan 2024 , 3:02 AM
- Belagavi
- 105
ಬೆಳಗಾವಿ: ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿಧ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ತನ್ನ ಪಾಲಕರು ಅಭ್ಯಾಸ ಮಾಡು ಅಂತ ಹೇಳಿದ್ದೆ ತಪ್ಪಾಯ್ತು ಇದಕ್ಕೆ ಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ತನ್ಮಯ ಮಹಿಂದ್ರಕರ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಅಭ್ಯಾಸ ಮಾಡುವಂತೆ ವಿದ್ಯಾರ್ಥಿ ಪಾಲಕರು ಒತ್ತಡ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಪಾಲಕರು ಅಭ್ಯಾಸ ಮಾಡು ಎಂದು ಹೇಳಿದ ಒಂದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು ಮಾತ್ರ ದೊಡ್ಡ ದುರಂತವೇ ಯಾಗದೇ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಈ ಘಟನೆ ಸಂಬಂಧ ಎಪಿಎಂಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.











