ಪ್ರತಿ ಭಾನುವಾರ ರಾಜ್ಯ ಸಂಪೂರ್ಣ ಲಾಕ್ ಡೌನ್ ಇಂದು ಸಂಜೆಯಿಂದಲೇ ಕರ್ಫ್ಯೂ ಜಾರಿ
- 15 Jan 2024 , 2:01 AM
- Belagavi
- 207
ಬೆಳಗಾವಿ: ಸಂಡೆ ಲಾಕ್ ಡೌನ್ ಗೆ ಕುಂದಾನಗರಿ ಬೆಳಗಾವಿಯಲ್ಲಿ ಸಿದ್ದತೆ ಮಾಡಿಕೊಂಡಿದೆ ಇಡೀ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದೆ , ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಆದೇಶ ನೀಡಿದೆ . ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಳ್ಳುತ್ತಿರುವ ಪೊಲೀಸರು. ಮೈಕ್ ಮೂಲಕ ಅನೌನ್ಸ್ ಮಾಡುತ್ತಿರುವ ಪೊಲೀಸ್ ಸಿಬ್ಬಂದಿ ಬಹಳ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರ ನೀಡಿರುವ ಹೊಸ ಆದೇಶದ ಪ್ರಕಾರ , ಇನ್ನುಮುಂದೆ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಲ್ಲಿರಲಿದೆ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಸಂಚಾರ ಇರುವುದಿಲ್ಲ . ಜೊತೆಗೆ ಕ್ಯಾಬ್ , ಆಟೋ , ವಾಣಿಜ್ಯ ಮಳಿಗೆ ಇನ್ನಿತರ ಅಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ . ಜುಲೈ 5 ರಿಂದ ಅನ್ವಯವಾಗುವಂತೆ ಆಗಸ್ಟ್ 2 ರವರೆಗೆ ಪ್ರತಿ ರವಿವಾರ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಅಗತ್ಯ ಚಟುವಟಿಕೆಗಳು ಹಾಗೂ ಈಗಾಗಲೆ ನಿಗದಿಯಾಗಿರುವ ವಿವಾಹಗಳಿಗೆ ನಿಯಮಾನುಸಾರ ಅವಕಾಶ ಕಲ್ಪಿಸಲಾಗಿದೆ.











