ಹಳೆ ದುನಿಯಾದತ್ತ ಕರ್ನಾಟಕ:ಹೊಸ ಮಾರ್ಗ ಸುಚಿ ಪ್ರಕಟಿಸಿದ ಸರ್ಕಾರ
- 30 Dec 2023 , 12:14 PM
- Bengaluru
- 137
ಬೆಂಗಳೂರು: ಕೋವಿಡ-19 ಪರಿಸ್ಥಿತಿಯನ್ನು ತಡೆಗಟ್ಟುವ ಕ್ರಮಗಳು ಮತ್ತು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಚರ್ಚಿಸಿ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಕೋವಿಡ-19 ಸೂಕ್ತ ನಡವಳಿಕೆಯನ್ನು ಅನುಸರಿಸಲು ಎಲ್ಲರಿಗೂ ವಿನಂತಿಸಿ ಈ ಮಾರ್ಗಸುಚಿಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ

1.ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು.

2.ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಸಭಾಂಗಣಗಳು 50% ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು ಕೋವಿಡ್ -19 ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳಿಗೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು.
3.ಉನ್ನತ ಶಿಕ್ಷಣ ಇಲಾಖೆಯ ಕಾಲೇಜುಗಳು ಮತ್ತು ಸಂಸ್ಥೆಗಳಿಗೆ 26/7/2021 ರಿಂದ ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ, ದೀರ್ಘಾವಧಿಯ ತಾಂತ್ರಿಕ ಕೋರ್ಸ್‌ಗಳನ್ನು ಒಳಗೊಂಡಂತೆ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಅನುಮತಿಸಲಾಗಿದೆ ಕೋವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಮಾತ್ರ ಅನುಮತಿ ನೀಡಲಾಗುವುದು.
4.ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳಿಗೆ ವಿಶೇಷ ಕಣ್ಗಾವಲು ಕ್ರಮಗಳ ಕುರಿತ ಆದೇಶಗಳು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತವೆ.










