
ಎಸ್. ಎಸ್. ಎಲ್. ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಆರ್. ಲತಾ. ಭೇಟಿ
- 14 Jan 2024 , 6:51 PM
- Chikballapur
- 101
ಚಿಕ್ಕಬಳ್ಳಾಪುರ:ಜಿಲ್ಲಾಧಿಕಾರಿಗಳಾದ ಆರ್. ಲತಾ ಅವರು ಇಂದು ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಜೂನಿಯರ್ ಕಾಲೇಜುಗಳಲ್ಲಿನ ಎಸ್. ಎಸ್. ಎಲ್. ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಬೆಳಿಗ್ಗೆ 8.30ರಿಂದಲೇ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿದ್ದಾರೆ. ಜಿಲ್ಲೆಯಲ್ಲಿ 17,102 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 99 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1,516 ಕೊಠಡಿಗಳನ್ನು ನಿಗದಿಗೊಳಿಸಲಾಗಿದೆ. 2,456 ಸಿಬ್ಬಂದಿಯನ್ನು ಪರೀಕ್ಷಾ ಕೆಲಸಕ್ಕೆ ನಿಯೋಜಿಸಲಾಗಿದೆ.

ಕೇಂದ್ರಗಳ ಹೊರ ಭಾಗದ ಮೂರು ಕಡೆ ನಾಮಫಲಕ ಅಳವಡಿಸಿ ನೋಂದಣಿ ಸಂಖ್ಯೆ ನಮೂದಿಸಲಾಗಿದೆ. ವಿದ್ಯಾರ್ಥಿಗಳು ಗುಂಪುಗೂಡದಂತೆ ಸಿಬ್ಬಂದಿ ತಿಳಿವಳಿಕೆ ಹೇಳುತ್ತಿದ್ದಾರೆ.
ನಗರದ ಸರ್ಕಾರಿ ಜೂನಿಯರ್ ಕಾಲೇಜು, ಬಿ. ಜಿ. ಎಸ್, ಜಚನಿ ಪರೀಕ್ಷಾ ಕೇಂದ್ರ ಸೇರಿದಂತೆ ವಿವಿಧ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಯವರು ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.