ಮೌನ ಮುರಿದ ಸಿಎಂ ಯಡಿಯೂರಪ್ಪ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ

ಬೆಂಗಳೂರು:  ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ರಾಷ್ಟ್ರೀಯ ಅಧ್ಯಕ್ಷರು ಹೇಳಿದ ಹಾಗೆ ನಾನು ಕೇಳುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು. ಜುಲೈ 26ಕ್ಕೆ ಸರಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಇದೆ. ಸರಕಾರದ ಸಾಧನೆಯ ಪುಸ್ತುಕ ಹೊರ ತರುತ್ತೇನೆ. ಜುಲೈ 26ರ ಬಳಿಕ ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದರು. 75ವರ್ಷ ದಾಟಿದವರಿಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ. ಯಡಿಯೂಪ್ಪನವರ ಕೆಲಸ ಮೆಚ್ಚಿ ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷ, ಅಮಿತ್ ಶಾ ಅವರು ನನಗೆ ಮುಖ್ಯಮಂತ್ರಿಯಾಗಲು ಸಹಕಾರ ಕೊಟ್ಟಿದ್ದಾರೆ. ನನಗೆ ಈಗ 78 ವರ್ಷ. ರಾಷ್ಟ್ರೀಯ ಪಕ್ಷದ ನಾಯಕರು ಏನು ನಿರ್ಧಾರ ತೆಗೆದುಕೊಂಡಂತೆ ನಡೆದುಕೊಳ್ಳುತ್ತೇನೆ ಎಂದರು.

promotions

promotions

Read More Articles