ಶಾಸಕ ಅನಿಲ್ ಬೆನಕೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ
- 14 Jan 2024 , 10:14 PM
- Belagavi
- 89
ಬೆಳಗಾವಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಪವರ್ ಸೆಂಟರ್ ಆಗಿದ್ದ ಬೆಳಗಾವಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ನಾನಾ ಕಡೆಯಿಂದ ಕಸರತ್ತು ನಡೆಸಿದ್ದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆಗೆ ಮರಾಠಾ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹ ಮಾಡುತ್ತಿದ್ದಾರೆ.

ಬೆಳಗಾವಿ ನಗರದಲ್ಲಿ ಇಲ್ಲಿಯವರೆಗೂ ಯಾರಿಗೂ ಸಚಿವ ಸ್ಥಾನ ನೀಡಿಲ್ಲ. ಅನಿಲ ಬೆನಕೆ ಯುವಕರಿದ್ದಾರೆ. ಉತ್ತರ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಪರ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವಂತೆ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಸಿಎಂ, ಹೈಕಮಾಂಡಗೆ ಪತ್ರ ಬರೆಯುವುದರ ಮೂಲಕ ಆಗ್ರಹಿಸಿದ್ದಾರೆ.











