ಚಿಕ್ಕಮಗಳೂರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
- 17 Dec 2023 , 10:18 PM
- Chikkamagaluru
- 107
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿ ಸಂಪೂರ್ಣಗೊಂಡ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಮುಂದೆ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಚಿಕ್ಕಮಗಳೂರು ವಿಧಾನಸಭಾ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಲಾಯಿತು. ಬಾವಿಕಟ್ಟೆಯಲ್ಲಿ ಐದು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆ. ನಾಲ್ಕು ಕೋಟಿ ರೂಪಾಯಿ ಅನುದಾನದಲ್ಲಿ ಮಲ್ಲೇನಹಳ್ಳಿ - ಬಿಂಡಿಗಾ ದೇವಿರಮ್ಮ ಬೆಟ್ಟಕ್ಕೆ ಸಂಪರ್ಕ ರಸ್ತೆಯ ಉದ್ಘಾಟನೆ, ಮೂವತ್ತನಾಲ್ಕು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾಗುವ ಮಲ್ಲೇನಹಳ್ಳಿ ಪಶು ವೈದ್ಯಕೀಯ ಆಸ್ಪತ್ರೆಗೆ ಭೂಮಿ ಪೂಜೆ ನೆರವೆರಿಸಲಾಯಿತು. ನೂರ ಐವತ್ತು ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಂಡ ಮಲ್ಲೇನಹಳ್ಳಿ - ನಾಗೇನಹಳ್ಳಿ ರಸ್ತೆ ಹಾಗೂ ಮುತ್ತಿನಪುರ - ದೇವರಹಳ್ಳಿ ರಸ್ತೆಯ ಉದ್ಘಾಟನೆ. ಅರುವತ್ತೆಂಟು ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಂಡ ಕುಮಾರಗಿರಿ - ಹೂವೇನಹಳ್ಳಿ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ನಡೆಸಲಾಯಿತು.











