ಬೊಮ್ಮಾಯಿ ಸಂಪುಟ ರಚನೆಗೆ ಕ್ಷಣಗನೆ: 29 ಶಾಸಕರು ಸಚಿವರಾಗಿ ಪ್ರಮಾಣವಚನ: ಸಿಎಂ ಬೊಮ್ಮಾಯಿ

ಬೆಂಗಳೂರು : ಸಚಿವ ಸಂಪುಟ ರಚನೆಯಲ್ಲಿ ಒಟ್ಟು 29 ಜನ ಶಾಸಕರು ನೂತನ ಸಚಿವರಾಗಿ ಇಂದು ಪ್ರಮಾಣ ವಚನ‌ ಸ್ವೀಕರಿಸಲಿದ್ದು, ಡಿಸಿಎ ಹುದ್ದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

promotions

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು. ಪ್ರಸ್ತುತ ಡಿಸಿಎಂ ಹುದ್ದೆ ಇರುವುದಿಲ್ಲ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದರು.

promotions

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬಗ್ಗೆ ಹೈಕಮಾಂಡ್, ಅರುಣ ಸಿಂಗ್ ಮಾತನಾಡಿದ್ದಾರೆ‌. ರಾಜಭವನಕ್ಕೆ ಕಳುಹಿಸಿದ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಇಲ್ಲ ಎಂದು ಉತ್ತರಿಸಿದರು‌.

Read More Articles