ಪಾಲಿಕೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಸ್ಪರ್ಧೆ : ಮಾಡಲಗಿ

ಬೆಳಗಾವಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಕೆ.ಎಚ್.ಕುಮಾರಸ್ವಾಮಿ ಸೂಚನೆ ಮೆರೆಗೆ ಬೆಳಗಾವಿ ‌ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಬೆಳಗಾವಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಹೇಳಿದರು.

promotions

ಬೆಳಗಾವಿ ಅಧಿವೇಶ, ಸುವರ್ಣಸೌಧ ನಿರ್ಮಾಣ‌‌ ಮಾಡಿರುವುದು ಮಾಜಿ ಸಿಎಂ ಕುಮಾರಸ್ವಾಮಿ ಅವರು, ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧೆ ನಡೆಸಲಿದೆ ಎಂದರು. ಹೆಣ, ಹೆಂಡ‌ ಹಂಚದೆ ದಕ್ಷ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು ಎಂದ ಅವರು, ಈ‌ ಬಾರಿ ಜನರು ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬೆಂಬಲಿಸುವಂತೆ ವಿನಂತಿಸಿಕೊಂಡರು.

promotions

Read More Articles