ಬಿಜೆಪಿ ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಮಾಡುತ್ತಿದೆ: ಶಾಸಕಿ ಲಕ್ಷ್ಮಿ ಆಕ್ರೋಶ
- 15 Jan 2024 , 12:10 AM
- Belagavi
- 87
ಬೆಳಗಾವಿ ಇನ್ನೊಂದು ಗಂಟೆಯಲ್ಲಿ ಪಾಲಿಕೆಯ ಚುನಾವಣೆಯ ಬಗ್ಗೆ ತೀರ್ಮಾನವಾಗಲಿದೆ ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರು ಶನಿವಾರ ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಚಿಹ್ನೆಯಿಂದ ಸ್ಪರ್ಧೆ ನಡೆಸುವ ವಿಚಾರವಾಗಿ ಕೆಪಿಸಿಸಿಯಿಂದ ಉಸ್ತುವಾರಿಯಾಗಿ ಬೆಂಗಳೂರಿನಿಂದ್ ಮಾಜಿ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ರಾಜ್ಯಸಭಾ ಸದಸ್ಯರನ್ನು ನೇಮಕ ಮಾಡಿದ್ದರು. ಅವರ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಬಹಳಷ್ಟು ಚರ್ಚೆಯಾಗಿ ಕೊನೆಯ ಹಂತಕ್ಕೆ ಬಂದಿದೆ. ಮುಂದೆ ಒಂದು ಗಂಟೆಯಲ್ಲಿ ಸ್ಪಷ್ಟವಾಗಬಹುದು ಎಂದರು.

ಬಿಜೆಪಿಯವರು ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗೂಂಡು ಹಾರಿಸಿ ಮೆರವಣಿಗೆ ಮಾಡಿ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ರಾಜಕಾರಣಿಗಳ ಅಭಿಮಾನಿಗಳು ಬಹಳಷ್ಟು ಜನ ಇರುತ್ತಾರೆ. ಒಬ್ಬರಿಗೆ ಒಂದು ಕಾನೂನು ಇನ್ನೊಬ್ಬರಿಗೆ ಒಂದು ಕಾನೂನು ಮಾಡೋದು ಸರಿಯಲ್ಲ. ಇದನ್ನು ಜನ ನೋಡುತ್ತಿದ್ದಾರೆ ಎಂದರು. ಒಂದು ಕಣ್ಣಿಗೆ ಸುಣ್ಣು. ಒಂದು ಕಣ್ಣಿಗೆ ಬೆಣ್ಣಿ ಮಾಡುತ್ತಿದೆ ಬಿಜೆಪಿ ಸರಕಾರ ಎಂದರು.











