ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಒಂದು ವಾರ ಲಾಕ್ ಡೌನ್

ಬೆಂಗಳೂರು: ಮಾರಕ ಕೊರೋನಾ ಮಾಹಾಮಾರಿ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಪರಿಣಾಮ ಬೆಂಗಳೂರು ನಗರವನ್ನು ಒಂದು ವಾರ ಕಾಲ ಲಾಕ್​ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 7 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಯಾವೆಲ್ಲ ಸೇವೆಗಳು ಇರಲಿವೆ ಮತ್ತು ಯಾವೆಲ್ಲಾ ಸೇವೆಗಳು ಇರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

promotions
ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜು.14ರಿಂದ ಜು.22ರವರೆಗೆ ಈ ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​ ಜಾರಿಯಾಗಲಿದೆ.ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ.

promotions
ಸಾರಿಗೆ ಸೇವೆಗಳಾದ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸೇವೆಗಳು ಸಂಪೂರ್ಣ ಸ್ಥಗಿತವಾಗಲಿದೆ. ಆದರೆ ಕೆಲ ತುರ್ತು ಸೇವೆಗಳಿಗೆ ಕೆಲ ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗಿದ್ದು, ಈ ಬಸ್ ಗಳು ಮಾತ್ರ ಲಾಕ್ ಡೌನ್ ಸಂದರ್ಭದಲ್ಲಿ ಚಲಿಸಲಿದೆ. ಕ್ಯಾಬ್ ಸೇವೆ, ಆಟೋ ಸೇವೆ ಕೂಡ ಸ್ಥಗಿತವಾಗಲಿದೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ‌ ನವರು ಟ್ವಿಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.

Read More Articles