ಬೆಳಗಾವಿಯಲ್ಲಿ ಲಾಕ್ ಡೌನ್ ಬೇಡ ಅಂದಿದ್ದೇಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
- 30 Dec 2023 , 5:55 PM
- Belagavi
- 129
ಬೆಳಗಾವಿ: ಕೊರೋನಾ ಸೋಂಕು ಹರಡುವಿಕೆ ತಡೆಯಲು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ 15 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು ವೀಡಿಯೋ ಸಂವಾದ ನಡೆಸಿದ್ದಾರೆ. ಲಾಕ್‌ಡೌನ್ ಜಾರಿಗೊಳಿಸಬೇಕೇ ಬೇಡವೇ ಎಂಬುವ ವಿಚಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ನಿಂದ ಪರಿಹಾರ ಸಿಗುತ್ತದೆ ಎಂದು ನನಗೆ ಅನ್ನಿಸುವುದಿಲ್ಲ ಆಯಾ ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಚಾರ ಆಯಾ ಜಿಲ್ಲಾಧಿಕಾರಿಗಳೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ನಾನು ಯಾರಿಗೂ ಲಾಕ್ ಡೌನ್ ಮಾಡಿ ಎಂದು ಸೂಚಿಸುವುದಿಲ್ಲ, ಈ ವಿಡಿಯೋ ಕಾನ್ಸರೆನ್ಸ್ ವೇಳೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ ಭಾನುವಾರದ ಲಾಕ್ ಡೌನ್ ಇರಲಿ ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದರು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಈ ರೀತಿ ಮನವಿ ಮಾಡಿದ್ದೇಕೆ ಎಂಬ ಪ್ರಶ್ನೆ ಮೂಡುತ್ತಿದೆ.












