ನಿಫಾ ವೈರಸ್:ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
- 14 Jan 2024 , 9:27 PM
- Delhi
- 144
ನವದೆಹಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಹಾಗೂ ತಜ್ಞರ ಸಮಿತಿಗೂ ಸೂಚನೆ ನೀಡಲಾಗಿದೆ ಎಂದರು.

ಸಚಿವರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.











