ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸುವಂತೆ ಎಬಿವಿಪಿ ಒತ್ತಾಯ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ವ್ಯಾಪಿಸಲಾರಂಭಿಸಿದ ಬಳಿಕ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳು ಈಗ ಹಂತಹಂತವಾಗಿ ಪುನರಾರಂಭಗೊಂಡಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ ಆರಂಭಗೊಂಡು, ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮತ್ತೆ ತೆರೆದುಕೊಂಡಿವೆ.

promotions

ಆದರೆ ಈಗ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ದಿನಕ್ಕೊಂದು ಸಮಸ್ಯೆ ಉದ್ಭವವಾಗುತ್ತಿದೆ ಇದನ್ನು ಸರಕಾರ ಪರಿಹರಿಸಬೇಕೆಂದು ಆಗ್ರಹಿಸಿ ಗುರುವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಾಲೆ-ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ.

promotions

ಕರ್ನಾಟಕ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಎಲ್ಲ ಬಸ್‌ಗಳು ಸೇವೆ ಒದಗಿಸುತ್ತಿವೆ. ಆದರೂ, ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ದಿನಕ್ಕೆ ಒಂದು ಅಥವಾ ಎರಡು ಬಸ್‌ಗಳು ಮಾತ್ರ ಸಂಚರಿಸುತ್ತಿವೆ .ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರತೊಂದರೆಯಾಗಿ ಪರಿಣಮಿಸಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಡಿಪ್ಲೋಮಾ ಇಂಜಿನಿಯರಿಂಗ್, ಸ್ನಾತಕ - ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ.ರಾಜ್ಯ ಸರಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆಎಲ್ಲಾ ವಿದ್ಯಾರ್ಥಿವೇತನವನ್ನುತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನದ ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಆಗ್ರಹಿಸಿದರು. ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲಗಳಿಗೆ ಅವಲಂಬಿತರಾಗಿರುವುದರಿಂದ  ರಾಜ್ಯದ ಹಿಂದುಳಿದ ವರ್ಗ, ಸಮಾಜಕಲ್ಯಾಣ ಮತ್ತುಅಲ್ಪಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿನಿಲಯಗಳ ಸಂಖ್ಯೆಗೆ ಮತ್ತು ವಸತಿನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಅಂತರವಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಸರಕಾರತಕ್ಷಣಕ್ಕೆ ವಸತಿನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಿರಣ ದುಕಾನದಾರ, ರೋಹಿತ ಉಮನಾಬಾದಿಮಠ, ಆಶಾ ಹೊಸಮನಿ, ರೇಖಾ ದೊಡಮನಿ ಸೇರಿದಂತೆ ಮೊದಲಾದವರು ಹಾಜರಿದ್ದರು.

Read More Articles