ಆಕ್ಷನ್ ಪ್ರಿನ್ಸ್ ದೃವ ಸರ್ಜಾ ಹಾಗೂ ಪತ್ನಿಗೆ ಕೋರೊನಾ ಸೋಂಕು
- 14 Jan 2024 , 11:55 PM
- Bengaluru
- 141
ಬೆಂಗಳೂರು: ಹೆಮ್ಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ವರೆಗೂ ಬಾಲಿವುಡ್ ಸೂಪರ್ ಸ್ಟಾರ್‌ಗಳ ಮನೆ ಬಾಗಿಲಿಗೆ ಕಾಲಿಟ್ಟಿದ ಡೆಡ್ಲಿ ವೈರಸ್ ಇಂದು ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ದ್ರುವಸರ್ಜಾ ಅವರಿಗೂ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದ ದೃವ ಸರ್ಜಾ ಮತ್ತು ಅವರ ಪತ್ನಿ ಇಬ್ಬರಿಗೂ ಸೋಂಕು ಇರುವುದು ವರದಿಯಿಂದ ತಿಳಿದುಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಗುಣಲಕ್ಷಣ ಕಂಡುಬಂದಿದ್ದು ಸೋಂಕು ತಗುಲಿರುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ದೃವ ಸರ್ಜಾ , ' ನನ್ನ ಹೆಂಡತಿ ಮತ್ತು ನಾನು ಕೋವಿಡ್ 19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್ ಬಂದಿದೆ . ಚಿಕಿತ್ಸೆ ಪಡೆಯಲು ಆಸ್ಪತ್ರೆ ದಾಖಲಾಗುತ್ತಿದ್ದೇವೆ. ನಾವು ಗುಣಮುಖರಾಗಿ ಬರುವ ವಿಶ್ವಾಸವಿದೆ ' ಎಂದು ಹೇಳಿಕೊಂಡಿದ್ದಾರೆ. ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ' ಎಂದು ಅವರು ಕೋರಿದ್ದಾರೆ. ಇದು ಸ್ಯಾಂಡಲ್‌ವುಡ್ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.












