ರಂಗಭೂಮಿ ಕಲಾವಿದೆ ಸುಭದ್ರಮ್ಮ ನಿಧನ, ಸಿಎಂ ಬಿಎಸ್ವೈ ಸಂತಾಪ

ಬಳ್ಳಾರಿ: ಹಿರಿಯ ರಂಗಭೂಮಿ ಕಲಾವಿದೆ, ನಾಡೋಜ ಸುಭದ್ರಮ್ಮ ಮನ್ಸೂರ್‌ (81) ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ನಗರದ ರೇಡಿಯೋಪಾರ್ಕ್‌ ಪ್ರದೇಶದ ಮನೆಯಲ್ಲಿ ರಾತ್ರಿ 11.30ರವೇಳೆಗೆ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಅವರನ್ನು ವಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.

promotions
    

ಇವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ವೈ ಸಂತಾಪ ಸೂಚಿಸಿದ್ದು. ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್‌ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

promotions

Read More Articles