ಗ್ರಾಮ ಪಂಚಾಯತಿ ಕ್ಲರ್ಕ್ ಎಸಿಬಿ ಬಲೆಗೆ
- 14 Jan 2024 , 11:49 PM
- Belagavi
- 105
ಬೆಳಗಾವಿ: ಗ್ರಾಮ ಪಂಚಾಯತಿ ಕ್ಲರ್ಕ್ ಒಬ್ಬ ವಾರಸಾ ಹೆಸರು ದಾಖಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ 7,400 ರೂ ಲಂಚ ಪಡೆಯುವ ವೇಳೆ ಭ್ರಷ್ಟಾಚಾರ ನಿಗ್ರಹ ಪಡೆ (ಎಸಿಬಿ) ಬಲೆಗೆ ಬಿದ್ದಿದ್ದಾನೆ.

ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಪಂಚಾಯತಿಯ ಕ್ಲರ್ಕ್ ಹಾಗೂ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಿದಗೌಡ ಬಸವಣ್ಣಿ ನೇರ್ಲಿ ಎಂಬುವವನು ಆಸ್ತಿ ರಿಜಿಸ್ಟರ್ ನಲ್ಲಿ ಅರ್ಜಿದಾರರೊಬ್ಬರ ವಾರಸಾ ಹೆಸರು ದಾಖಲಿಸಲು ರೂ.7,400 ಲಂಚ ಬೇಡಿಕೆ ಇಟ್ಟಿದ್ದನು. ಅದರಂತೆ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ. ದಾಳಿ ವೇಳೆ ಎಸಿಬಿ ಜಿಲ್ಲಾ ವರಿಷ್ಠಾಧಿಕಾರಿ ಬಿ. ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ಇದ್ದರು.










