ನಂದಗಾಂವ ಶಾಲಾ ಕಟ್ಟಡ ಉದ್ಘಾಟಿಸಿದ ಶಾಸಕ ಕುಮಠಳ್ಳಿ
- 19 Dec 2023 , 6:39 AM
- Belagavi
- 109
ಅಥಣಿ :ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊಂದಬೇಕು. ಶಿಕ್ಷಣವಂತ ಸಮಾಜ ನಿರ್ಮಾಣವಾದಲ್ಲಿ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು.

ಅವರು ತಾಲೂಕಿನ ನಂದಗಾಂವ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೆಚ್ಚುವರಿ ಶಾಲೆ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡುತ್ತಾ ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರದಾದ್ಯಂತ ಶೈಕ್ಷಣಿಕ ಅಭಿವೃದ್ಧಿಯೊಂದಿಗೆ ಪರಿಸರ ಹಾಗೂ ಜಲರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡುವುದಾಗಿ ತಿಳಿಸಿದರು.

ಈ ವೇಳೆ ಮುಖಂಡರಾದ ಕಿರಣಗೌಡ ಪಾಟೀಲ, ಅನೀಲ ಸೌದಾಗರ, ಶಶಿ ಸಾಳವೆ ಸೇರಿದಂತೆ ಇತರರು ಉಪಸ್ಥಿತರಿದ್ದರು.










