ಬೆಳಗಾವಿ ಜಿಲ್ಲೆಯನ್ನು ಲಾಕ್ ಡೌನ್ ಮಾಡಲು ಮನವಿ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಇಡೀ ಜಿಲ್ಲೆಯನ್ನು ಲಾಕ್ ಡೌನ್ ಮಾಡಬೇಕೆಂದು ಬೆಳಗಾವಿಯ ಭ್ರಷ್ಟಾಚಾರ ನಿರ್ಮೂಲನಾ ಪರಿವಾರದ ಮುಖಂಡರು, ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈಗಾಗಲೆ ಬೆಂಗಳೂರು, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳನ್ನು ಲಾಕ್‍ಡೌನ್ ಮಾಡಲಾಗಿದೆ ಅದರಂತೆ ಕೊರೋನಾ ವ್ಯಾಪಕವಾಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಗೊಳಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷ ಸುಜೀತ ಮುಳಗುಂದ, ಶ್ವೇತಾ ಕುಲಕರ್ಣಿ, ನಿತೀನ್ ಆರ್.ಬಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.

promotions

promotions

Read More Articles