ಗಾಂಧಿ ಸೇವಾ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗಾಂಧಿ ಸ್ಮಾರಕ ನಿಧಿ ವತಿಯಿಂದ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರದ ಗಾಂಧಿ ಸೇವಾ ಪ್ರಶಸ್ತಿ ನೀಡಿ ಗೌರವಿಸಿದರು.

promotions

ಸಿದ್ದಗಂಗಾ ಮಠದ ಪರವಾಗಿ ಡಾ. ಶಿವಪ್ಪ ಹಾಗೂ ಹಿರಿಯ ಗಾಂಧೀವಾದಿ ಶ್ರೀಮತಿ ಮೀರಾತಾಯಿ ಕೊಪ್ಪಿಕರ ಅವರ ಪರವಾಗಿ ಮುಧೋಳ ಶಾಸಕರೂ ಆಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಪ್ರಶಸ್ತಿ ಸ್ವೀಕರಿಸಿದರು.

promotions

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಗಣಿ ಮತ್ತು ಭೂ ವಿಜ್ಞಾನಸಚಿವ ಹಾಲಪ್ಪ ಆಚಾರ, ಸಂಸದರಾದ ಶಿವಕುಮಾರ್ ಉದಾಸಿ, ಡಾ. ಎಲ್. ಹನುಮಂತಯ್ಯ, ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಗೇರಿ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಆಯುಕ್ತ ಜಿ. ಜಗದೀಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More Articles