1508 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತ..!

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಜನರ ನಿದ್ದೆಗೆಡಿಸುತ್ತಿದೆ. ಇತ್ತ ಬೆಳಗಾವಿ ಜಿಲ್ಲೆಯಲ್ಲಿ ಇಂದು 1508 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಇದ್ದು. ಈಗಾಗಲೇ ಹೊರರಾಜ್ಯದಿಂದ ಬಂದವರಿಂದ ಸೋಂಕು ಹೆಚ್ಚುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 48 ಆ್ಯಕ್ಟೀವ್ ಕೊರೊನಾ ಪಾಸಿಟಿವ್ ಕೇಸ್ ಇದ್ದು, ಆ 48 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಇನ್ನು 11,037 ಜನರ ಮೇಲೆ‌ ನಿಗಾವಹಿಸಿದೆ.

ಒಟ್ಟು 2989 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದ್ದು. ಒಟ್ಟು 3603 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ.

ಈವರೆಗೆ ಒಟ್ಟು 9741 ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಈವರೆಗೂ 135 ಕೊರೊನಾ‌ ಪಾಸಿಟಿವ್ ಕೇಸ್ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಓರ್ವ ವೃದ್ಧೆ ಸಾವು, 7934 ಜನರ ವರದಿ ಕೊರೊನಾ ನೆಗೆಟಿವ್, 94 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

promotions

Read More Articles