ಅದ್ದೂರಿ ರಾಜ್ಯೋತ್ಸವದ ಮೆರವಣಿಗೆಗೆ ಚರ್ಚಿಸಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ
- 15 Jan 2024 , 2:55 AM
- Belagavi
- 97
ಬೆಳಗಾವಿ : ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವದ ಮೆರವಣಿಗೆಗೆ ವಿವಿಧ ಕನ್ನಡಪರ ಸಂಘಟನೆಗಳು ಒತ್ತಾಯಿಸುತ್ತಿರುವುದು ಈ ಕುರಿತು ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮ ಸ್ನೇಹಿತರೊಂದಿಗೆ ಮಾತನಾಡಿದರು.

ಬೆಳಗಾವಿಯಲ್ಲಿ ಅದ್ದೂರಿಯಾಗಿ ರಾಜ್ಯೋತ್ಸವ ಮೆರವಣಿಗೆಗೆ ವಿವಿಧ ಕನ್ನಡಪರ ಸಂಘಟನೆಗಳು ಆಗ್ರಹಿಸುತ್ತಿವೆ. ಕೊರೋನಾ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಈ ಸಂಬಂಧ ತಜ್ಞರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ನಡೆಯುತ್ತಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪಷ್ಟ ಬಹುಮತದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.











