ನರಳಾಡಿ ಆಸ್ಪತ್ರೆಯಲ್ಲಿ ಜೀವ ಬಿಟ್ಟ ಯುವತಿ
- 15 Jan 2024 , 4:52 AM
- Belagavi
- 101
ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನ ಗ್ರಾಮವೊಂದರ 30 ಯುವತಿಗೆ ಸೂಕ್ತ ಚಿಕಿತ್ಸೆ ಇಲ್ಲದೆ ಪ್ರಾಣ ಬಿಟ್ಟಿರುವ ಘಟನೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಗ್ರಾಮವೊಂದರ 30 ವರ್ಷದ ಯುವತಿ ಸಾವನಪ್ಪಿದ್ದು, ಈ ಯುವತಿ ತೀವ್ರ ಮಧುಮೇಹದಿಂದ ಬಳಲುತ್ತಿದ್ದಳು ಬಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿದಾಗ ಕೊರೊನಾ ದೃಢವಾಗಿತ್ತು. ಬಳಿಕ ಕೊವಿಡ್ ವಾರ್ಡ್‌ಗೆ ಈ ಯುವತಿಯನ್ನು ಶಿಫ್ಟ್ ಮಾಡಲಾಗಿತ್ತು. ಯುವತಿ ಮಧುಮೇಹದಿಂದ ಬಳಲುತ್ತಿದ್ದರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.












