ಸರಳ ರಾಜ್ಯೋತ್ಸವಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ

ಬೆಳಗಾವಿ : ಕೊರೊನಾ ಸೋಂಕಿನ ಭೀತಿಯ ನಡುವೆಯೂ ಬೆಳಗಾವಿಯ ಗಡಿನಾಡ ಗುಡಿ, ಕುಂದಾನಗರಿ ಬೆಳಗಾವಿ ಕನ್ನಡ ಹಬ್ಬವನ್ನು ಸರಳವಾಗಿ ಆಚರಿಸಲು ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಎಲ್ಲಿ ನೋಡಿದ್ದಲ್ಲಿ ಕನ್ನಡದ ಗುಂಗು ಹಳದಿ, ಕೆಂಪು ಬಣ್ಣ ರಂಗೇರಿದೆ. ಬೆಳಗಾವಿಯಲ್ಲಿ ಅತ್ಯಂತ ಅದ್ದೂರಿಯಾಗಿ ಕನ್ನಡದ ಹಬ್ಬವನ್ನು ಆಚರಿಸಲಾಗುತ್ತಿದೆ.

promotions

ಆದರೆ ಈ ಬಾರಿಯ ಕೊರೊನಾ ಸೋಂಕು ಹಾಗೂ ಕನ್ನಡ ಚಲನಚಿತ್ರ ನಟ ಪುನೀತ್ ರಾಜುಕುಮಾರ ಅವರ ನಿಧನದಿಂದ ಅತ್ಯಂತ ಸರಳವಾಗಿ ಆಚರಣೆ ಮಾಡಲು ವಿವಿಧ ಕನ್ನಡ ಪರ ಸಂಘಟನೆಗಳು ನಿರ್ಧಾರ ಮಾಡಿವೆ. ಕರ್ನಾಟಕದ ರಾಜ್ಯೋತ್ಸವವನ್ನು ಕನ್ನಡದ ಹಬ್ಬವನ್ನಾಗಿ ಆಚರಿಸುವ ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕನ್ನಡದ ಅಭಿಮಾನಿಗಳು ಕನ್ನಡ ತೇರನ್ನು ಎಳೆಯುವ ಮೂಲಕ ತಮ್ಮ ಸ್ವಾಭಿಮಾನವನ್ನು ತೋರಿಸಿ ಇಡೀ ರಾಜ್ಯದ ಗಮನ ಸೆಳೆಯುತ್ತಾರೆ. ಆದರೆ ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ತಿರ್ಮಾನಿಸಲಾಗಿದೆ.

promotions

ಕ್ರಾಂತಿಯ ಸ್ಥಳವಾದ ವೀರ ರಾಣಿ ಚನ್ನಮ್ಮಳ ವೃತ್ತವನ್ನು ವಿಶೇಷವಾಗಿ ಅಲಂಕಾರ ಮಾಡಲಾಗುತ್ತಿದೆ. ವೀರರಾಣಿ ಚನ್ನಮ್ಮ ಪುತ್ಥಳಿಯನ್ನು ಬೆಳಗಾವಿ ಮಹಾನಗರ ಪಾಲಿಕೆ ಚನ್ನಮ್ಮನ ವೃತ್ತಕ್ಕೆ ಕನ್ನಡದ ರಂಗೇರಿಸುವ ಕಾರ್ಯವನ್ನು ಮಾಡುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಕರೆದು ಕನ್ನಡ ಹೋರಾಟಗಾರರಿಂದ ಸಲಹೆ ಸೂಚನೆಗಳನ್ನು ಪಡೆದು ಈ ಹಬ್ಬದ ಉತ್ಸಾಹವನ್ನು ಇಮ್ಮಡಿಗೊಳಿಸುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗುತ್ತಿದೆ.

Read More Articles