ಸಿಂದಗಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ ಮೊದಲ ಸುತ್ತಿನಿಂದಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡು ಬರುತ್ತಿದ್ದು, ಕೊನೆಗೆ ಕಮಲ‌ ಅರಳಿಸುವಲ್ಲಿ ಯಶಸ್ವಿಯಾಗಿದ್ದು, ನಗರದ ಸೈನಿಕ ಶಾಲೆಯ ಮತ ಎಣಿಕೆ ಕೇಂದ್ರದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ.

promotions

ಮೊದಲ ಸುತ್ತಿನಿಂದ ಹದಿನೈದನೇ ಸುತ್ತಿನ ವರೆಗೆ ಬಿಜೆಪಿ ಭರ್ಜರಿ ಅಂತರ ಕಾಯ್ದುಕೊಂಡು ಗೆಲುವಿನತ್ತ ಮುನ್ನಡೆಯುತ್ತಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಇಮ್ಮಡಿಗೊಳ್ಳುವಂತಾಗಿದೆ.

promotions

ಮತ ಎಣಿಕೆ ಕೇಂದ್ರದ ಎದುರು ಬಿಜೆಪಿ ಭಾವುಟವನ್ನು ಹಾರಿಸುತ್ತ, ಪಟಾಕಿ ಸಿಡಿಸಿ, ಕೇಕೇ ಹಾಕಿ ಸಂಭ್ರಮಿಸುತ್ತಿದ್ದಾರೆ. 15 ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ 63676, ಕಾಂಗ್ರೆಸ್ ನ ಅಶೋಕ ಮನಗೂಳಿ 44831, ಜೆಡಿಎಸ್ ನ ನಾಜಿಯಾ ಅಂಗಡಿ 2834 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದ್ದರು.

ಕೊನೆಯ ಸುತ್ತಿವರೆಗೂ ಭರ್ಜರಿ ಅಂತರ ಕಾಯ್ದುಕೊಂಡಿದ್ದ ರಮೇಶ ಭೂಸನೂರ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಎದುರು ಭರ್ಜರಿ ಜಯ ಸಾಧಿಸಿದ್ದಾರೆ.

Read More Articles