ಡ್ರೋನ್ ಪ್ರತಾಪ್ ಬಂಧನ, ಅಷ್ಟಕ್ಕೂ ಪ್ರತಾಪ ಬಂಧನ ಆಗಿದ್ದೆಕೆ ?

ಬೆಂಗಳೂರು: ಇತಿಚಿಗೆ ಡ್ರೋನ್ ವಿಜ್ಞಾನಿ ಎಂದು ಸುದ್ದಿಯಲ್ಲಿರುವ ಪ್ರತಾಪ್ ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ಧಾರೆ. ಬೆಂಗಳೂರಿನಲ್ಲಿ ಕ್ವಾರಂಟೈನ್​ನಲ್ಲಿರಬೇಕಿದ್ದ ಡ್ರೋನ್ ಪ್ರತಾಪ್ ಇದೀಗ ಮೈಸೂರಿನಲ್ಲಿ ಪತ್ತೆಯಾಗಿದ್ದು. ಕ್ವಾರಂಟೈನ್ ನಿಯಮಗಳನ್ನ ಉಲ್ಲಂಘಿಸಿದ ಕಾರಣಕ್ಕೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಹೈದ್ರಾಬಾದ್ ನಿಂದ ಬಂದಿದ್ದ ಪ್ರತಾಪಗೆ, ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ. ನಿಯಮ ಉಲ್ಲಂಘಿಸಿ ಮನೆಯಲ್ಲಿರದೇ ಮೊಬೈಲ್ ಸ್ವಿಚ್ಛ ಆಫ್ ಮಾಡಿಕೊಂಡಿದ್ದ. ಹೀಗಾಗಿ ಇವರ ವಿರುದ್ದ ಕಂಪ್ಲೀಟ್ ದಾಖಲಾಗಿತ್ತು. ನಂತರ ಮೂರು ತಂಡಗಳನ್ನು ರಚಿಸಿ ಪ್ರತಾಪ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಪ್ರತಾಪ್ ಸಾಧನೆ ಬಗ್ಗೆಯೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಮೈಸೂರಿನ ಸಂಬಂಧಿಕರೊಬ್ಬರ ಮನೆಯಲ್ಲಿ ಪ್ರತಾಪ್ ತಂಗಿದ್ದ. ಪ್ರತಾಪ್‌ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ, ನಂತರವೇ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

promotions

promotions

Read More Articles