ಬೆಳಗಾವಿಯಲ್ಲಿ ಐಟಿ, ಬಿಟಿ ಕಂಪನಿ ಸ್ಥಾಪನೆಗೆ ಕರವೇ ಒತ್ತಾಯ

ಬೆಳಗಾವಿ: ಐಟಿ, ಬಿಟಿ ಕಂಪನಿಗಳನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಭಾನುವಾರ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

promotions

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೊಗಲಾಡಿಸಲು ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಉತ್ತರ ಕರ್ನಾಟಕದ ಬಹುತೇಕ ಯುವಕರು ಬೇರೆ ಬೇರೆ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವುದನ್ನು ತಪ್ಪಿಸಲು ಸರಕಾರ ಬೆಳಗಾವಿಯಲ್ಲಿಯೇ ಐಟಿ, ಬಿಟಿ ಕಂಪನಿಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು. ಬೆಳಗಾವಿಯ‌ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯುವ ಮುನ್ನವೇ ಸರಕಾರ ಐಟಿ, ಬಿಟಿ ಕಂಪನಿಗಳ‌ ಸ್ಥಾಪನೆ ಮಾಡಲು ಸ್ಪಷ್ಟ ನಿರ್ಧಾರ ತೆಗೆದುಕೊಂಡು‌ ಆದೇಶ ಹೊರಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

promotions

ಕರವೇ ಪ್ರವೀಣ ಶೆಟ್ಟಿ ಬಣದ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ, ಡಾ. ಶರಣು ಗದ್ದುಗೆ, ಡಾ. ಬಾಳಾಸಾಹೇಬ ಉದಗಟ್ಟಿ, ಅಭಿಲಾಷ ಸೇರಿದಂತೆ ಇನ್ನಿತರರು ‌ಉಪಸ್ಥಿತರಿದ್ದರು.

Read More Articles