ನೂತನ‌ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧಿಕಾರ ಸ್ವೀಕಾರ

ಬೆಳಗಾವಿ:ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

promotions

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವರ್ಗಾವಣೆಗೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು, ಪರಿಷತ್ ಚುನಾವಣೆ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.

promotions

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ವೆಂಕಟೇಶಕುಮಾರ್ ಅವರನ್ನು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾವಣೆಗೊಳಿಸಿದೆ.

Read More Articles