ಅಧಿಕಾರಿಗಳು ಕರ್ತವ್ಯದ ಜೊತೆಗೆ ಕಾಯ್ದೆ-ಕಾನೂನು ಅಧ್ಯಯನ ಮಾಡಬೇಕು: ವಿಜಯ ದೇವರಾಜ ಅರಸು

ಬೆಳಗಾವಿ :ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಅಥವಾ ನಿಯಮಗಳು ಉಲ್ಲಂಘನೆಯಾದಲ್ಲಿ, ಸರಿಯಾದ ಕಾಯ್ದೆಯಡಿಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ಇಂತಹ ಸಂದರ್ಭಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಸಲಹೆ ನೀಡಲಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಕಾರ್ಯದರ್ಶಿಗಳಾದ ವಿಜಯ ದೇವರಾಜ ಅರಸು ಅವರು ತಿಳಿಸಿದರು.

promotions

ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರದಿಂದ ಆರಂಭಗೊಂಡ ಎರಡು ದಿನಗಳ ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳ ಹಾಗೂ ನಿರೀಕ್ಷಕರುಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜೊತೆಗೆ ವಿವಿಧ ತರಬೇತಿಗಳನ್ನು ಪಡೆಯಬೇಕು ಹಾಗೂ ಕಾನೂನು ಕಾಯ್ದೆಗಳ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಇದರಿಂದ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸವಾಲುಗಳು ಎದುರಾದರೂ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಲಿವೆ ಎಂದು ತಿಳಿಸಿದರು. ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಾನೂನು, ಕಾಯ್ದೆಯಡಿಯಲ್ಲಿ ಹೇಗೆ ಪ್ರಕರಣ ದಾಖಲಿಸಬೇಕು ಹಾಗೂ ಸಾಕ್ಷಿಗಳನ್ನು ಸರಿಯಾದ ಮಾದರಿಯಲ್ಲಿ ಹೇಗೆ ಸಂಗ್ರಹಿಸಬೇಕು ಮತ್ತು ಸಾಕ್ಷಿಗಳ ಅನುಗುಣವಾಗಿ ಪ್ರಕರಣ ವಜಾ ಆಗದಂತೆ ದಾಖಲಿಸುವುದು ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು. ಅಧಿಕಾರಿಗಳು ಅನಿರೀಕ್ಷಿತ ದಾಳಿಯಲ್ಲಿ ಹೆಚ್ಚಿನ ಮಟ್ಟದ ಸಾಕ್ಷಿ ಸಂಗ್ರಹಿಸಬೇಕು, ಪ್ರಸ್ತುತ ತಂತ್ರಜ್ಞಾನ ಬಳಕೆಯ ಮೂಲಕ ವಿಡಿಯೋ ಹಾಗೂ ಫೋಟೋ ಸಾಕ್ಷಿ ಸಂಗ್ರಹಿಸಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.

promotions

ಅಧಿಕಾರಿಗಳು ತರಬೇತುದಾರರಿಗೆ ಸ್ಪಂದಿಸಬೇಕು, ಯಾವುದೇ ಗೊಂದಲಗಳಿದ್ದರೂ ಮಾಹಿತಿ ಹಾಗೂ ಸಲಹೆ ಪಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿಜಯ ದೇವರಾಜ ಅರಸು ಅವರು ತಿಳಿಸಿದರು. ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂದಿಹಟ್ಟಿ, ಕೆ.ಜಿ ಜಾನ್ ಸನ್, ಅಧಿಕಾರಿಗಳಾದ ಸಂಗಮೇಶ ಹಿರೇಮಠ, ವಕೀಲರಾದ ಅಶೋಕ ಹಲಗಲಿ, ಪ್ರೊ. ಶ್ರೀಕಾಂತ ಕೆ.ಎಸ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಮತ್ತಿತರ ಅಧಿಕಾರಿಗಳು ಹಾಗೂ ನಿರೀಕ್ಷಕರುಗಳು ಉಪಸ್ಥಿತರಿದ್ದರು.

Read More Articles