ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುತ್ತಾ ಮತಾಂತರ ಕಾಯ್ದೆ ಮಸೂದೆ...?

ಬೆಳಗಾವಿ: ರಾಜ್ಯದಲ್ಲಿ ಕೇಳಿ ಬರುತ್ತಿರುವ ಮತಾಂತರ ಕಾಯ್ದೆ ನಿಷೇಧ ಮಸೂದೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಮಂಡನೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೌದು. ಕೊರೊನಾ ಸೋಂಕು, ಪ್ರವಾಹದ ಕಾರಣದಿಂದ ಎರಡೂ ವರ್ಷಗಳಿಂದ ನಡೆಯದ ಬೆಳಗಾವಿಯ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದೆ.

promotions

ಬೆಳಗಾವಿಯಲ್ಲಿ ಅಧಿವೇ‌ಶನ ನಡೆಯುತ್ತಿರುವುದರಿಂದ ಬಹುತೇಕ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ‌ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಕಾರ್ಯ ಸರಕಾರ, ವಿಪಕ್ಷಗಳು ಮಾಡಬೇಕಿದೆ. ಆದರೆ ರಾಜ್ಯದಲ್ಲಿ ಕೇಳಿ ಬರುತ್ತಿರುವ ಮತಾಂತರ ಕಾಯ್ದೆ ನಿಷೇಧಕ್ಕೆ ಕೂಗು ಕೇಳಿ‌ ಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಬೆಳಗಾವಿ ಅಧಿವೇಶನದಲ್ಲಿಯೇ ಮಸೂದೆ ಜಾರಿಗೆ ತರಲು ಸಿದ್ಧತೆ ನಡೆಸಿವೆ. ಆದರೆ ವಿಪಕ್ಷಗಳು ಸರಕಾರಕ್ಕೆ ಚಾಟಿ ಬೀಸುವ ಲಕ್ಷಣ ಇದ್ದು, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಮತಾಂತರ ಕಾಯ್ದೆ ನಿಷೇಧ ಮಾಡುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.

promotions

ಇದರ ನಡುವೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಂಡುಕೊಡುವಲ್ಲಿ ಸರಕಾರ ವಿಫಲವಾಗಿದೆ. ಕೊರೊನಾ‌ ನಿಯಂತ್ರಣ, ಬಿಟ್ ಕಾಯಿನ್ ಪ್ರಕರಣ, 40 %ಕಮಿಷನ್ ಸರಕಾರ ಎಂಬ ಅಸ್ತ್ರವನ್ನು ಮುಂದಿಟ್ಟುಕೊಂಡ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಮಾಸ್ಟರ್ ಪ್ಲ್ಯಾನ್ ರೂಪಿಸಿವೆ. ಇದಕ್ಕೆ ಉತ್ತರ ಕೊಡಲು ಸರಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಕರ್ನಾಟಕದ ಶಕ್ತಿ ಸೌಧ ಎಂದು ಕರೆಸಿಕೊಳ್ಳುವ ಸುವರ್ಣ ವಿಧಾನಸೌಧದಲ್ಲಿ ಈ ಭಾಗದ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿ ಸರಕಾರದಿಂದ ಶಾಶ್ವತ ಪರಿಹಾರ ಕಲ್ಪಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ ಎಂಬುದು ಇಲ್ಲಿನ ಜನರ ಒತ್ತಾಯವಾಗಿದೆ.

Read More Articles