ಜಿಲ್ಲೆಗಳಲ್ಲಿ ಅಗತ್ಯಕ್ಕನುಗುಣವಾಗಿ ನ್ಯಾಯಬೆಲೆ ಅಂಗಡಿ ಮಂಜೂರು:ಸಚಿವ ಕತ್ತಿ

ಬೆಳಗಾವಿ: ಜಿಲ್ಲೆಗಳಲ್ಲಿ ಅಗತ್ಯಕ್ಕನುಗುಣವಾಗಿ ಹಾಡಿಗಳು/ತಾಂಡಾಗಳು/ಗೊಲ್ಲರಹಟ್ಟಿ/ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಕಾಲೋನಿ ಪ್ರದೇಶಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ/ಉಪನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಅವರು ವಿಧಾನಪರಿಷತ್ನಲ್ಲಿ ತಿಳಿಸಿದರು.

promotions

ಸದಸ್ಯ ಪ್ರಕಾಶ ರಾಠೋಡ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಸದರಿ ಪ್ರದೇಶಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶಕ್ಕೆ ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 376 ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ನ್ಯಾಯಬೆಲೆ ಅಂಗಡಿಗಳ ಬೇಡಿಕೆ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ತಕ್ಷಣ ಮಂಜೂರು ಮಾಡಲಾಗುವುದು; ಮಂಜೂರು ಮಾಡದೇ ಸತಾಯಿಸಿದರೇ ಆ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.

promotions

ಈ ಪ್ರದೇಶಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಆಯಾ ಹಾಡಿ/ತಾಂಡಾ/ಗೊಲ್ಲರಹಟ್ಟಿ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿನ ಅರ್ಹ ಸ್ವ-ಸಹಾಯ/ಸಂಘ-ಸಂಸ್ಥೆಗಳು/ವ್ಯಕ್ತಿಗಳನ್ನು ಮಾತ್ರ ಪರಿಗಣಿಸಲು ಮತ್ತು ಕನಿಷ್ಠ 100 ಪಡಿತರ ಚೀಟಿಗಳಿಗೆ ಸೀಮಿತಗೊಳಿಸಿ ನ್ಯಾಯಬೆಲೆ ಅಂಗಡಿಯನ್ನು ಮಂಜೂರು ಮಾಡಲು ಅನುಮತಿ ನೀಡಲಾಗಿದೆ ಎಂದರು.

Read More Articles