ನೆರೆ, ಬೆಳೆ ಪರಿಹಾರಕ್ಕೆ ಜಯಕರ್ನಾಟಕ ಜನಪರ ವೇದಿಕೆ ಆಗ್ರಹ

ಬೆಳಗಾವಿ :ಅತಿವೃಷ್ಠಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ಹಾಗೂ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಪುನರ್ ನಿರ್ಮಾಣ, ದುರಸ್ಥಿ ಮಾಡಬೇಕೆಂದು ಆಗ್ರಹಿಸಿ ಗುರುವಾರ ಕೊಂಡುಸಕೊಪ್ಪ‌ದಲ್ಲಿ ಜನಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

promotions

ಪ್ರವಾಹದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸಾಕಷ್ಟು ಪ್ರಮಾಣದಲ್ಲಿ ರೈತರ ಜಮೀನುಗಳಲ್ಲಿ ಬೆಳೆದ ಬೆಳೆಗಳು ನೀರು ಪಾಲು ಆಗಿವೆ. ಸರಕಾರ ಅವರಿಗೆ ಇಲ್ಲಿಯವರೆಗೂ ಬೆಳೆ ಪರಿಹಾರ ನೀಡಿಲ್ಲ.

promotions

ಅಲ್ಲದೆ, ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಕೂಡಲೇ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Read More Articles