ರೈತರಿಗೆ ರಸಗೊಬ್ಬರ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆ ನಿರ್ಲಕ್ಷ್ಯ
- 6 Jan 2024 , 6:42 AM
- Haveri
- 121
ಹಾವೇರಿ: ಜಿಲ್ಲೆಯ ರಾಣೇಬೆನ್ನೂರ ತಾಲೂಕಿನಲ್ಲಿ ರೈತರಿಗೆ ರಸಗೊಬ್ಬರ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆ ವಿಫಲವಾಗಿದ್ದು. ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ರೈತ ಮುಖಂಡ ಹನುಮಂತಪ್ಪ ಕಬ್ಬಾರ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚಿಗೆ ಜಿಲ್ಲೆಯಲ್ಲಿ ಪೂರೈಕೆಯಾದ ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಬೇರೆ ತಾಲೂಕುಗಳಿಗೆ ಕಳುಹಿಸಿದ್ದು ಈ ಸಮಸ್ಯೆಗೆ ಕಾರಣವಾಗಿದೆ. ಈ ಬಗ್ಗೆ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿತ್ತು. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರವನ್ನು ಮುಂಚಿತವಾಗಿಯೇ ದಾಸ್ತಾನು ಮಾಡಿಕೊಳ್ಳದ ಕಾರಣ ಅಭಾವ ಉಂಟಾಗಿದೆ. ರಸಗೊಬ್ಬರ ಕೊರತೆಯಿಂದ ರೈತರಿಗೆ ಹೊರೆಯಾಗುತ್ತಿದ್ದು ಮಾರುಕಟ್ಟೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರಿಗೆ ಅವಶ್ಯವಿರುವ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಒತ್ತಾಹಿಸಿದ್ದಾರೆ.












