ಕೊಪ್ಪಳ ಜಿಲ್ಲೆಯ ರೈತರ ಪರವಾಗಿ ಸಿಎಂಗೆ ಧನ್ಯವಾದ ಅರ್ಪಿಸಿದ ರೈತ ಶಿವನಗೌಡ ಪಾಟೀಲ

ಕೊಪ್ಪಳ: ಜಿಲ್ಲೆಯಲ್ಲಿ ರಾಜ್ಯದ ಬಿ.ಎಸ್. ಯಡಿಯೂರಪ್ಪ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ  ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಸವಾಲುಗಳ ಒಂದು ವರ್ಷ, ಪರಿಹಾರದ ಸ್ಪರ್ಶ' ಕಾರ್ಯಕ್ರಮದ ನೇರಪ್ರಸಾರವನ್ನು ವರ್ಚುವಲ್ ವೇದಿಕೆ ಮುಖಾಂತರ ಕೊಪ್ಪಳದಲ್ಲಿ ವೀಕ್ಷಣೆ ಮಾಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಇಂದು ಸೋಮವಾರ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ಕರ್ನಾಟಕ ಸರ್ಕಾರವು ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಾಧನೆಯ ಕಿರುಪುಸ್ತಕ "ಸವಾಲುಗಳ ಒಂದು ವರ್ಷ; ಪರಿಹಾರದ ಸ್ಪರ್ಶ" ಪ್ರಗತಿ ವರದಿ ಹಾಗೂ ಜನಪದ ಮಾಸ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ವೈ ಅವರೊಂದಿಗೆ ನೇರ ಸಂವಾದದಲ್ಲಿ ಮಾತನಾಡಿದ ಕುಷ್ಟಗಿ ತಾಲ್ಲೂಕಿನ ಟಕ್ಕಳಕಿ ಗ್ರಾಮದ ರೈತ ಶಿವನಗೌಡ ಪಾಟೀಲ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ನಮ್ಮ ಹೊಲದಲ್ಲಿ ಬದು ನಿರ್ಮಾಣ ಮಾಡಿಕೊಂಡಿದ್ದೇವೆ. ಏಳು ಕುಟುಂಬಗಳು 16 ದಿನಗಳ ಕಾಲ ಕೆಲಸ ಮಾಡಿದ್ದು, ಪ್ರತಿ ಸದಸ್ಯರ ಖಾತೆಗೆ 4400 ರೂ.ಗಳು ಜಮಾ ಆಗಿದೆ.  ಲಾಕ್‌ಡೌನ್ ಸಮಯದಲ್ಲಿ ಮೊಬೈಲ್ ಎ.ಟಿ.ಎಂ. ಮೂಲಕ ಮನೆ ಬಾಗಿಲಲ್ಲೇ ಹಣ ಪಡೆದಿದ್ದೇವೆ. ಇದರಿಂದ ನಮ್ಮ ಗ್ರಾಮದ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗಿದೆ ರಾಜ್ಯದ ಹಾಗೂ ನಮ್ಮ ಕೊಪ್ಪಳ ಜಿಲ್ಲೆಯ ಸಮಸ್ತ ರೈತರ ಪರವಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ನಾನು ಕೊಪ್ಪಳ ಜಿಲ್ಲೆಗೆ ಬಂದಾಗ ತಮ್ಮನ್ನು ಭೇಟಿ ಮಾಡುವುದಾಗಿ ಸಾವಯವ ಕೃಷಿಕ ಶಿವನಗೌಡ ಪಾಟೀಲಗೆ ಹೇಳಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ತಹಶೀಲ್ದಾರ ಜೆ.ಬಿ.ಮಜ್ಜಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣ ಮೂರ್ತಿ ದೇಸಾಯಿ, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

promotions

promotions

Read More Articles