
ಸಂಗೊಳ್ಳಿ ಉತ್ಸವಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ ಡಿಸಿ ಹಿರೇಮಠ.
- 17 Dec 2023 , 8:25 PM
- Belagavi
- 106
ಬೈಲಹೊಂಗಲ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹುಟ್ಟಿದ ಊರಲ್ಲಿ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುವ ಸಂಗೊಳ್ಳಿ ಉತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳವಾದ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಿಂದ ಆಗಮಿಸಿದ ವೀರಜ್ಯೋತಿಯನ್ನು ಡೊಳ್ಳು ಕುಣಿತ ಮೂಲಕ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ, ವೀರಜ್ಯೋತಿಯ ಸ್ವಾಗತ ಹಾಗೂ ನಂದಿ ಧ್ವಜಾರೋಹಣ ನೆರವೇರಿಸುವ ಮೂಲಕ ಸರಳ ಮತ್ತು ಸಂಪ್ರದಾಯದ ಪ್ರಕಾರ ಉತ್ಸವಕ್ಕೆ ಚಾಲನೆ ನೀಡಿದರು.
ಇದೆ ಸಂದರ್ಭದಲ್ಲಿ ಸಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಮಹಾಂತೇಶ ಕೌಜಲಗಿ ಹಾಗೂ ಜಿಲ್ಲಾಧಿಕಾರಿ ಹಿರೇಮಠ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.