ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ಪ್ರಕರಣ

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

Your Image Ad

ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

Your Image Ad

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

Your Image Ad

Read More Articles