ಚುನಾವಣೆ ಪ್ರಚಾರ ಕಾರ್ಯಾಲಯ ಉದ್ಘಾಟಿಸಿದ ಲಕ್ಷ್ಮಿ ಹೆಬ್ಬಾಳಕರ್

  • 14 Jan 2024 , 11:48 PM
  • Goa
  • 127

ಪಣಜಿ : ಗೋವಾ ರಾಜ್ಯ ವಿಧಾನಸಭೆಯ ಚುನಾವಣೆಯ ಪ್ರಯುಕ್ತ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು 2 ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದು, ಸೋಮವಾರ ಪ್ರಚಾರ ಕಾರ್ಯಾಲಯವನ್ನು ಉದ್ಘಾಟಿಸಿದರು.

promotions

ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿಯ ಕಚೇರಿಯಲ್ಲಿ ಕಾಂಗ್ರೆಸ್ ನ ಗೋವಾ ರಾಜ್ಯದ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರೊಂದಿಗೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಚುನಾವಣೆಯ ರೂಪುರೇಷೆಗಳ ಕುರಿತಾಗಿ ಚರ್ಚಿಸಿದ ಹೆಬ್ಬಾಳಕರ್ ನಂತರ ಪ್ರಚಾರ ಕಾರ್ಯಾಲಯಕ್ಕೆ ಚಾಲನೆ ನೀಡಿದರು. ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತಿ, ಅಭ್ಯರ್ಥಿ ಒಲ್ಯಾನ್ಸಿಯೋ ಸಿಮೋಸ್ ಮೊದಲಾದವರು ಇದ್ದರು.

promotions

Read More Articles