ರೇಕುಗಳ ಸರಬರಾಜಿಗೆ ರೈಲ್ವೆ ಸಚಿವರಿಗೆ ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • 14 Jan 2024 , 11:29 PM
  • Delhi
  • 88

ನವದೆಹಲಿ :ಕಲ್ಲಿದ್ದಿಲು ಸಾಗಾಣಿಕೆಗೆ ಅಗತ್ಯವಿರುವ ರೇಕುಗಳ ಸರಬರಾಜಿನ ಕುರಿತು ಚರ್ಚಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿಯಲ್ಲಿ ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

promotions

ಅವರು ಇಂದು ನವದೆಹಲಿ ಭೇಟಿ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಾಹಿತಿ ನೀಡಿದರು.

promotions

ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗಳು ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈಲ್ವೆಯೋಜನೆಗಳಅನುಷ್ಠಾನ:

ರಾಜ್ಯದಲ್ಲಿ ಕೇಂದ್ರ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿದೆ. ರಸ್ತೆ ಮತ್ತು ರೈಲ್ವೆ ಯೋಜನೆಗಳಲ್ಲಿ ತೆರಿಗೆ ವಿನಾಯ್ತಿ ಹಾಗೂ ಅನುಮೋದನೆಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಯಿಸಿ, ಎಸ್ ಟಿ ಆರ್ ಆರ್ ರಸ್ತೆ ಗಳಿಗೆ ಜಿಎಸ್ ಟಿ ವಿನಾಯ್ತಿ ನೀಡಲು ಒಪ್ಪಿಗೆ ನೀಡಲಾಗಿದೆ.

ಭೂ ಸ್ವಾಧೀನದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 50:50 ಪಾಲುದಾರಿಕೆಯಲ್ಲಿ ರೈಲ್ವೆ ಯೋಜನೆಗಳು ಅನುಷ್ಠಾನಗೊಳ್ಳುತ್ತವೆ. ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ ಒಂದೇ ವರ್ಷ ಸಂಪೂರ್ಣ ಹಣ ಬಿಡುಗಡೆ ಮಾಡಲಾಗುವುದಿಲ್ಲ.

ಆದ್ಯತೆ ಆಧಾರದ ಮೇಲೆ ಹಣ ಬಿಡುಗಡೆ ನಿಗದಿಪಡಿಸಿಕೊಳ್ಳಲಾಗಿದೆ. ಕೆಲವು ರೈಲ್ವೆ ಯೋಜನೆಗಳಲ್ಲಿ ಹಣ ಬಿಡುಗಡೆಯಾಗಿದ್ದರೂ ಭೂ ಸ್ವಾಧೀನದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದಲ್ಲಿ ಮಂಜೂರಾತಿ ದೊರೆತು ಅನುದಾನ ಬಿಡುಗಡೆಯಾಗಿರುವ ಪ್ರಮುಖ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರವೂ ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಆರೋಗ್ಯಮೂಲಸೌಕರ್ಯಕ್ಕೆಅನುದಾನ:

ಆರೋಗ್ಯ ಸಚಿವರನ್ನು ಭೇಟಿಯಾಗಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರಕ್ಕೆ ಒದಗಿಸಲು ಮನವಿ ಮಾಡಲಾಗಿದ್ದು, ಅವರು ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.

Read More Articles