ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಬಿಜೆಪಿಯೇ ಕಾರಣ: ಶಾಸಕ‌ ಸತೀಶ

ಬೆಳಗಾವಿ: ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಶಾಲು ಸಂಘರ್ಷ ನಡೆಯುತ್ತಿದ್ದು, ಈ ಸಂಘರ್ಷ ನಡೆಯದಂತೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ಧಾರೆ.

promotions

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್- ಕೇಸರಿ ಶಾಲು ಸಂಘರ್ಷಕ್ಕೆ ಬಿಜೆಪಿ ಸರ್ಕಾರವೇ ಕಾರಣ. 70 ವರ್ಷದ ಕಾಂಗ್ರೆಸ್‌ ಅಧಿಕಾರದಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಸಿದರು.

promotions

ಶಿವಮೊಗ್ಗದ ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಸರ್ಕಾರ ಎನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹಿಜಬ್- ಕೇಸರಿ ಶಾಲು ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ.

ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ ಸಂಗತಿ ಎಂದಿದ್ದಾರೆ.

Read More Articles