ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆದ ಸೌಹಾರ್ದ ‌ಸಭೆ

ಬೆಳಗಾವಿ :ಹಿಜಾಬ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮೀಷನರೇಟ್, ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಸಮುದಾಯದ ಮುಖಂಡರು ಮತ್ತು ಬೆಳಗಾವಿ ನಗರದ ಪ್ರಮುಖರು ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ “ಸೌಹಾರ್ಧತಾ ಸಭೆ”ಯನ್ನು ಜರುಗಿಸಲಾಯಿತು. ಬೆಳಗಾವಿ ನಗರದಲ್ಲ್ಲಿ ಹಿಜಾಬ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕದಡುವಂತಹ ಯಾವುದೇ ಘಟನೆಗೆ ಪ್ರೋತ್ಸಾಹ ನೀಡದಂತೆ ಮನವಿ ಮಾಡಲಾಯಿತು.

promotions

ಮಾನ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಹಾಗೂ ಸರ್ಕಾರದ ಸೂಚನೆಗಳನ್ನು ತಪ್ಪದೇ ಪಾಲಿಸಿಕೊಂಡು ಬರುವಂತೆ ಸೂಚಿಸಲಾಯಿತು. ಶಾಲಾ ಕಾಲೇಜುಗಳ ಕಡೆಗೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಹೊರತುಪಡಿಸಿ ಬೇರೆ ಯಾರೂ ಹೊಗದಂತೆ ಸೂಚಿಸಲಾಯಿತು.

promotions

ಸಭೆಯಲ್ಲಿ ಸೇರಿದ್ದ ಎಲ್ಲ ಮುಖಂಡರು ಹಾಗೂ ಪ್ರಮುಖರು ಇದಕ್ಕೆ ಸಂಪೂರ್ಣ ಒಪ್ಪಿಗೆ ಸೂಚಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಆಶ್ವಾಸನೆ ನೀಡಿದರು.

ಇದರೊಂದಿಗೆ ಹಿಜಾಬ ಮತ್ತು ಕೇಸರಿ ಶಾಲು ವಿಚಾರದಲ್ಲಿ ಯಾರೂ ಕೂಡ ವಾಟ್ಸಆ್ಯಪ್, ಫೇಸಬುಕ್, ಇನ್ಸ್ಟಾಗ್ರಾಮ ಹಾಗೂ ಇನ್ನಿತರ ಯಾವುದೇ ರೀತಿಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋಧನಕಾರಿ ಪೋಸ್ಟ ಹಾಕುವುದಾಗಲಿ ಅಥವಾ ಹೇಳಿಕೆ/ ಪ್ರತಿ ಹೇಳಿಕೆಗಳನ್ನು ನೀಡುವುದಾಗಲಿ ಮಾಡಬಾರದೆಂದು ಸೂಚಿಸಿ ಸಭೆಯನ್ನು ಮುಕ್ತಾಯ ಮಾಡಲಾಯಿತು.

Read More Articles